ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ

Update: 2025-04-29 21:31 IST
ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ
  • whatsapp icon

ಕೋಟ, ಎ.29: ಶಿವಮೊಗ್ಗದಲ್ಲಿ ಕ್ಯಾಟರಿಂಗ್ ಕೆಲಸ ಮಾಡಿಕೊಂಡಿದ್ದ ಕಕ್ಕುಂಜೆ ನಿವಾಸಿ ಮಂಜುನಾಥ (60) ಎಂಬವರು ಎ.27ರಂದು ಶಿವಮೊಗ್ಗಕ್ಕೆ ಹೋಗುವುದಾಗಿ ಮನೆಯಿಂದ ಹೋದವರು ನಾಪತ್ತೆಯಾಗಿ ದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಕಳೆದ 4 ವರ್ಷಗಳಿಂದ ಮಲ್ಪೆಮತ್ತು ಉಡುಪಿ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಬಡಾನಿಡಿಯೂರು ಗ್ರಾಮದ ಕದಿಕೆ ನಿವಾಸಿ ಸಂಜಯ ಸ್ವೈನ್(41) ಎಂಬವರು ಎ.18ರಂದು ಕೆಲಸಕ್ಕೆಂದು ಮನೆಯಿಂದ ಹೋದವರು ಈವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News