ಆ.29 ರಂದು ರಾ. ಕ್ರೀಡಾ ದಿನಾಚರಣೆ, ಬೃಹತ್ ರಕ್ತದಾನ ಶಿಬಿರ
Update: 2023-08-28 14:32 GMT
ಉಡುಪಿ, ಆ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಸ್ಪತ್ರೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲಯನ್ಸ್ ಕ್ಲಬ್ ಅಮೃತ್ ಉಡುಪಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ರೆಡ್ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ದೈಹಿಕ ಶಿಕ್ಷಣ ವಿಭಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ಬೃಹತ್ ರಕ್ತದಾನ ಶಿಬಿರ ಆ.29 ರಂದು ಬೆಳಗ್ಗೆ 9:30ಕ್ಕೆ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆವರಣದಲ್ಲಿ ನಡೆಯಲಿದೆ.
ಶಾಸಕ ಯಶ್ಪಾಲ್ ಎ ಸುವರ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ ಹಾಕೆ ಮತ್ತಿತರರು ಭಾಗವಹಿಸಲಿದ್ದಾರೆ.