ಮಲ್ಪೆ| ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ: ಓರ್ವ ಮೃತ್ಯು

Update: 2024-08-25 15:53 GMT

ಮಲ್ಪೆ: ಎರಡು ದ್ವಿಚಕ್ರ ವಾಹನಗಳ ಮಧ್ಯೆ ಆ.25ರಂದು ಬೆಳಗ್ಗೆ ಲಕ್ಷ್ಮೀ ನಗರದ ಬಳಿ ಸಂಭವಿಸಿದ ಅಪಘಾತದಲ್ಲಿ ಓರ್ವ ಸವಾರ ಮೃತಪಟ್ಟು, ಇಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ.

ಮೃತರನ್ನು ರವಿರಾಜ್ ಎಂದು ಗುರುತಿಸಲಾಗಿದೆ. ಇನ್ನೊಂದು ದ್ವಿಚಕ್ರ ವಾಹನದ ಸವಾರ ಮಧು ಮತ್ತು ಹಿಂಬದಿ ಸವಾರ ನಿತೇಶ್ ಎಂಬವರು ಗಾಯ ಗೊಂಡಿದ್ದಾರೆ.

ಮಲ್ಪೆಕಡೆಯಿಂದ ಸಂತೆಕಟ್ಟೆಯ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನವು ರಸ್ತೆಯನ್ನು ದಾಟುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಮೂವರು ಸವಾರರು ವಾಹನಗಳೊಂದಿಗೆ ರಸ್ತೆಯ ಮೇಲೆ ಬಿದ್ದರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ರವಿರಾಜ್ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News