ಸ್ಪರ್ಧಾತ್ಮಕ ಪರೀಕ್ಷೆಗೆ ಆನ್‌ಲೈನ್ ತರಬೇತಿ

Update: 2023-10-05 13:38 GMT

ಉಡುಪಿ : ಜಿಲ್ಲೆಯ ನಿರುದ್ಯೋಗ ಯುವಕ ಹಾಗೂ ಯುವತಿ ಯರಿಗೆ ಸರಕಾರಿ ಉದ್ಯೋಗ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಯು ಅಗತ್ಯವಿ ರುವುದರಿಂದ, ಉಡುಪಿ ಜಿಲ್ಲಾ ಪಂಚಾಯತ್ ಸ್ಟುಡಿಯೋದಿಂದ ಅ.೪ರಿಂದ ಪ್ರತಿ ದಿನ ಸಂಜೆ ೫:೩೦ರಿಂದ ೭ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಆನ್‌ಲೈನ್ ತರಬೇತಿಯನ್ನು ನೀಡಲಾಗುತ್ತಿದೆ.

ತರಬೇತಿಯನ್ನು ಪಡೆಯಲಿಚ್ಛಿಸುವವರು ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಹಾಜರಿದ್ದು, ಇದರ ಸದುಪ ಯೋಗ ಪಡೆದುಕೊಳ್ಳುವಂತೆ ಹಾಗೂ ಈ ಕುರಿತು ಮಾಹಿತಿಗಾಗಿ ಉಡುಪಿ ನಗರಸಭೆಯನ್ನು ಸಂಪರ್ಕಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News