ಕಸ್ತೂರಿ ರಂಗನ್ ವರದಿಗೆ ವಿರೋಧ: ಶಾಸಕರೊಂದಿಗೆ ಸಂವಾದ

Update: 2024-09-23 15:45 GMT

ಬೈಂದೂರು, ಸೆ.23: ಕಸ್ತೂರಿ ರಂಗನ್ ವರದಿ ಅನುಷ್ಠಾನ ಮತ್ತು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಆತಂಕದಲ್ಲಿ ರುವ ಜಡ್ಕಲ್-ಮುದೂರು ಗ್ರಾಮಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಅಲ್ಲಿನ ನಿವಾಸಿಗ ಳೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಶಾಸಕ ಗಂಟಿಹೊಳೆ, ಮೀಸಲು ಅರಣ್ಯ ಮತ್ತು ಬಫರ್ ಝೋನ್ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ನಿವಾಸಿಗಳಿಗೆ ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಆಗಬಹುದಾದ ಸಮಸ್ಯೆಗಳಿಗೆ ಭಯಗೊಂಡಿ ರುವ ಜಡ್ಕಲ್, ಮುದೂರು ಗ್ರಾಮದ ಜನರು ಈಗಾಗಲೇ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸರಕಾರಕ್ಕೆ ಪ್ರತಿಭ ಟನೆಯ ಬಿಸಿ ಮುಟ್ಟಿಸುವ ಮೂಲಕ ಉಡುಪಿ ಜಿಲ್ಲೆಯಲ್ಲಿ ಮೊದಲ ಹೋರಾಟಕ್ಕೆ ಮುನ್ನುಡಿ ಬರೆದಂತಾಗಿದೆ ಎಂದರು.

ಈ ಪ್ರತಿಭಟನೆ ಕಿಚ್ಚು ಇಡೀ ಉಡುಪಿ ಜಿಲ್ಲೆಗೆ ಪಸರಿಸಿ ಒಂದು ಜನಂದೋಲನವಾಗಿ ಪರಿವರ್ತನೆಗೊಂಡಾಗ ನಮ್ಮ ಹೋರಾ ಟಕ್ಕೆ ನಿಶ್ಚಿತವಾಗಿ ಫಲ ದೊರೆಯಲಿದೆ. ಈ ಹೋರಾಟದ ನಮ್ಮೆಲ್ಲರ ಹೋರಾಟವಾಗಬೇಕಿದೆ. ಯಾವುದೇ ಮಟ್ಟದ ಹೋರಾಟಕ್ಕೆ ಎಲ್ಲಿಗೆ ಕರೆದರೂ ನಿಮ್ಮ ಜೊತೆಗಿದ್ದೇನೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಪರಿಸರ ಸೂಕ್ಷ್ಮ ಪ್ರದೇಶವೂ ಜನವಸತಿ ಪ್ರದೇಶದಿಂದ ಹೊರಗಿರಬೇಕು. ಕಾಡಿನ ಒಳಗೆ ಹಲವಾರು ವರ್ಷಗಳಿಂದ ವಾಸವಾಗಿರುವ ಕುಟುಂಬಕ್ಕೆ, ಕೃಷಿ ಜಾಗಕ್ಕೆ ಸರಿಯಾದ ಪರಿಹಾರ ಕೊಡಬೇಕು. ಸೂಕ್ಷ್ಮ ವಲಯವನ್ನು ಜೀರೋ ಮಾಡಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಶಾಸಕರ ಮುಂದಿಟ್ಟರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News