ಪರಶುರಾಮ ಥೀಂ ಪಾರ್ಕ್ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿಲ್ಲ: ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಸ್ಪಷ್ಟನೆ

Update: 2023-09-05 16:15 GMT

ಉಡುಪಿ, ಸೆ.5: ಕಾರ್ಕಳ ತಾಲೂಕಿನ ಬೈಲೂರು ಸಮೀಪದ ಉಮಿಕಲ್ ಬೆಟ್ಟದಲ್ಲಿ ಉಡುಪಿ ಜಿಲ್ಲಾ ನಿರ್ಮಿತಿ ಕೇಂದ್ರದ ಮೂಲಕ ನಿರ್ಮಾಣಗೊಂ ಡಿರುವ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಬಾಕಿ ಉಳಿದಿರುವ ಕೆಲ ಕಾಮಗಾರಿಯನ್ನು ಪೂರ್ಣ ಗೊಳಿಸಿ ಶೀಘ್ರವೇ ಮತ್ತೆ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ಕೇಂದ್ರದ ಯೋಜನಾ ನಿರ್ದೇಶಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಉಡುಪಿಯ ನಿರ್ಮಿತಿ ಕೇಂದ್ರ ಜಿಲ್ಲಾಡಳಿತದ ಒಂದು ಅಂಗಸಂಸ್ಥೆ ಯಾಗಿದ್ದು, ಜಿಲ್ಲಾಧಿಕಾರಿಗಳು ಇದರ ಅಧ್ಯಕ್ಷರಾಗಿರು ತ್ತಾರೆ. ಸರಕಾರದ ಅನುದಾನದ ಕೆಲವೊಂದು ಸಿವಿಲ್ ಕಾಮಗಾರಿಗಳನ್ನು ಉಡುಪಿ ಜಿಲ್ಲಾ ನಿರ್ಮಿತಿ ಕೇಂದ್ರದ ಮೂಲಕ ಮಾಡಲಾಗುತ್ತಿದೆ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

2021-22ನೇ ಸಾಲಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವ ದೊಂದಿಗೆ ಬೈಲೂರಿನ ಉಮಿಕಲ್‌ಬೆಟ್ಟದಲ್ಲಿ ಪರಶುರಾಮ ಥೀಂ ಪಾರ್ಕ ಕಾಮಗಾರಿಯಲ್ಲಿ ಪ್ರಾರಂಭಿಸಲಾಗಿತ್ತು. ಕಾಮಗಾರಿಗಳು ಪೂರ್ಣಗೊಳ್ಳುವ ಮೊದಲೇ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಪರಶುರಾಮ ಥೀಂ ಪಾರ್ಕ್‌ನ್ನು ಉದ್ಘಾಟನೆಗೊಳಿಸಲಾಗಿತ್ತು.

ಈ ಕಾಮಗಾರಿಗೆ ಪೂರ್ಣ ಪ್ರಮಾಣದ ಅನುದಾನ ಬಿಡುಗಡೆಯಾಗಿದ್ದು, ಉದ್ಘಾಟನೆ ಸಲುವಾಗಿ ಕೆಲವು ಕಾಮಗಾರಿ ಗಳನ್ನು ಬಾಕಿ ಉಳಿಸಿಕೊಂಡು ಉದ್ಘಾಟನೆ ನಡೆಸಲಾಗಿತ್ತು. ಇದೀಗ ಪರಶುರಾಮ ಮೂರ್ತಿ ಹಾಗೂ ಇನ್ನಿತರ ಸಿವಿಲ್ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಅನುದಾನದ ಕೊರತೆ ಇದ್ದರೂ ಮಂದಗತಿಯಲ್ಲಿ ಕಾಮಗಾರಿ ನಡೆಯುತ್ತಿದೆ. ಇದೀಗ ಸಾರ್ವಜನಿಕ ವಲಯದಲ್ಲಿ ಕೆಲವೊಂದು ವ್ಯಕ್ತಿಗಳು ವಾಸ್ತವಾಂಶ ತಿಳಿಯದೇ ಪರಶುರಾಮ ಥೀಂ ಪಾರ್ಕ್ ಬಗ್ಗೆ ಅಪ ಪ್ರಚಾರ ಮಾಡುತಿದ್ದು, ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.

ಆದುದರಿಂದ ಈ ಕಾಮಗಾರಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಕಾಮಗಾರಿಯನ್ನು ಪೂರ್ಣಗೊಳಿಸಿ ಗುಣಮಟ್ಟ ಹಾಗೂ ಶ್ರೇಷ್ಠತೆಯೊಂದಿಗೆ ಶೀಘ್ರವೇ ಪರಶುರಾಮ ಥೀಂ ಪಾರ್ಕ್ ಸಾರ್ವಜನಿಕರಿಗೆ ಮುಕ್ತವಾಗಿ ಮುಂದಿನ ದಿನಗಳಲಿಲ ಪ್ರೇಕ್ಷಣೀಯ ಸ್ಥಳವಾಗಿ ಕಾಣಿಸಿಕೊಳ್ಳಲಿದೆ ಎಂದವರು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News