ಉಡುಪಿ ಜಿಲ್ಲೆಯ 470 ಸ್ಥಳಗಳಲ್ಲಿ ಗಣೇಶೋತ್ಸವಕ್ಕೆ ಅನುಮತಿ: ಎಸ್ಪಿ
Update: 2023-09-17 20:57 IST
ಉಡುಪಿ, ಸೆ.17: ಉಡುಪಿ ಜಿಲ್ಲೆಯ ಒಟ್ಟು 470 ಸ್ಥಳಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾ ಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಸೆ.18ರಿಂದ 23ರವರೆಗೆ ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆ ಆಗದಂತೆ ಅನುಮತಿ ನೀಡಲಾಗಿದೆ. ಈ ಸಂಬಂಧ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ ಒದಗಿಸಲಾಗಿದ್ದು, ಸುಮಾರು 900 ಪೊಲೀಸರನ್ನು ನಿಯೋಜಿಸ ಲಾಗುತ್ತಿದೆ. ಮೂರು ಕೆಎಸ್‌ಆರ್‌ಪಿ ಮತ್ತು 8 ಜಿಲ್ಲಾ ಸಶಸ್ತ್ರ ಪಡೆ ತುಕಡಿಯನ್ನು ನಿಯೋಜಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿ ಪ್ರಕಾರ ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳನ್ನು ಬಳಸಲು ಅನುಮತಿ ಇಲ್ಲ. ಆದುದರಿಂದ ಕಾನೂನು ಪಾಲನೆ ಮಾಡುವ ಮೂಲಕ ಎಲ್ಲರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದರು.