ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೋಟೋಗ್ರಫಿ ತರಬೇತಿ ಕಾರ್ಯಗಾರ

Update: 2024-10-05 08:07 GMT

ಕಾರ್ಕಳ : ಶಿರ್ವ ಸಂತ ಮೇರಿ ಪದವಿಪೂರ್ವ ಕಾಲೇಜು ಇದರ ಎನ್ಎಸ್ಎಸ್ ವಾರ್ಷಿಕ ಶಿಬಿರದ ಅಂಗವಾಗಿ ಫೋಟೋಗ್ರಫಿ ಕಾರ್ಯಗಾರ ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಶುಕ್ರವಾರ ನಡೆಯಿತು.

ವಿಜಯ ಕರ್ನಾಟಕ ವರದಿಗಾರ ಉದಯ್ ಮುಂಡ್ಕೂರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಫೋಟೋಗ್ರಫಿ ಮತ್ತು ವಿಡಿಯೋಗ್ರಪಿಯ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಯಶಂಕರ್ ಕೆ. , ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಮರಿಯ ಜೆಸಿಂತಾ ಪೋಟಾ೯ಡೊ, ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೋಟೋಗ್ರಫಿ ತರಬೇತಿ ಕಾರ್ಯಗಾರಸಂತ ಮೇರಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ನಾಯಕ ಪ್ರಥ್ವೀ ,ಎನ್ಎಸ್ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದರು.


Delete Edit


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News