ದೈಹಿಕ, ಮಾನಸಿಕ ಆರೋಗ್ಯ ಬಹು ಮುಖ್ಯ: ಡಾ.ಅಪೇಕ್ಷಾ ರಾವ್

Update: 2023-09-05 14:57 GMT

ಉಡುಪಿ, ಸೆ.5: ಹದಿಹರೆಯ ಒಬ್ಬ ವ್ಯಕ್ತಿಯ ಜೀವನದ ಸಂಕ್ರಮಣ ಕಾಲ. ಈ ಸಂದರ್ಭದಲ್ಲಿ ಜೀವಜಗತ್ತಿನ ಎಲ್ಲ ಜೀವಿಗಳಲ್ಲಿ ಆಗುವಂತೆ ಮನುಷ್ಯ ನಲ್ಲಿಯೂ ಕೂಡ ಪ್ರಾಕೃತಿಕ ಬದಲಾವಣೆಗಳು ಆಗುವುದು ಸಹಜ. ಈ ವಿಷಯದಲ್ಲಿ ಕೀಳರಿಮೆ, ಸಂಕೋಚ, ಮುಜುಗರ ಪಡುವ ಅಗತ್ಯ ಇಲ್ಲ ಎಂದು ಡಾ.ಅಪೇಕ್ಷಾ ಡಿ.ರಾವ್ ಹೇಳಿದ್ದಾರೆ.

ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಉಡುಪಿ ಲಯನ್ಸ್ ಕ್ಲಬ್ ಪ್ರಾಯೋಜ ಕತ್ವದಲ್ಲಿ ನಡೆದ ಹದಿ ಹರೆಯದ ಸಮಸ್ಯೆಗಳ ಕುರಿತು ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಮುಖ್ಯ ಅತಿಥಿಯಾಗಿ ಲಯನ್ಸ್ ಕ್ಲಬ್ ಅಧ್ಯಕ್ಷ ಗೀತಾ ಎಂ.ರಾವ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯಲ್ಲಿ ದೀರ್ಘಕಾಲ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ರಾಮಕೃಷ್ಣ ನಾಯಕ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್‌ನ ಕೋಶಾಧಿಕಾರಿ ಶೈಲಿ ನಾಯಕ್, ನಿಕಟಪೂರ್ವ ಅಧ್ಯಕ್ಷ ಉಮೇಶ್ ನಾಯಕ್, ಕಾರ್ಯಕ್ರಮ ಅಧಿಕಾರಿ ವಾದಿರಾಜ ರಾವ್, ಮುಖ್ಯ ಶಿಕ್ಷಕರು ಹಾಗೂ ಸಂಸ್ಥೆಯ ಎಲ್ಲಾ ಶಿಕ್ಷಕರೂ ಪಾಲ್ಗೊಂಡಿದ್ದರು. ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿದರು. ಜ್ಯೋತಿ ನಿರೂಪಿಸಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News