ಉಡುಪಿ ಕಾಲೇಜು ಪ್ರಕರಣದಲ್ಲಿ ರಾಜಕೀಯ ಸರಿಯಲ್ಲ: ರಮೇಶ್ ಕಾಂಚನ್

Update: 2023-07-27 15:53 GMT

ಉಡುಪಿ, ಜು.೨೭: ಕಳೆದ ಒಂದು ವಾರದಿಂದ ಉಡುಪಿ ಖಾಸಗಿ ಕಾಲೇಜೊಂದರಲ್ಲಿ ವಿಡಿಯೋ ಚಿತ್ರೀಕರಣದ ವಿಷಯದಲ್ಲಿ ಚರ್ಚೆ ನಡೆಯುತ್ತಿದ್ದು ಈ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯು ನ್ಯಾಯಯುತವಾದ ತನಿಖೆ ನಡೆಸುತ್ತಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡದೆ ತನಿಖೆಗೆ ಸಹಕಾರ ಮಾಡಬೇಕು. ಸತ್ಯಾಂಶ ಹೊರಬರದೆ ಇದರಲ್ಲಿ ರಾಜಕೀಯ ಲೇಪ ಹಚ್ಚುವುದು ಸಮಂಜಸ ವಲ್ಲ. ಇಲ್ಲಿ ವಿದ್ಯಾರ್ಥಿಗಳ ಮಧ್ಯೆ ಕೋಮು ಬೀಜ ಬಿತ್ತುವುದು ಸರಿಯಲ್ಲ. ಪೊಲೀಸ್ ಇಲಾಖೆಯು ಸಮರ್ಥವಾಗಿದೆ. ಸರಿಯಾದ ತನಿಖೆ ನಡೆಸಿ ನ್ಯಾಯ ಒದಗಿಸುವ ಭರವಸೆ ನಮಗಿದೆ. ತನಿಖೆಯ ಸತ್ಯಾಸತ್ಯತೆ ಹೊರಬರುವ ತನಕ ತಾಳ್ಮೆಯಿಂದ ಎಲ್ಲರೂ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News