ಕುಂದಾಪುರ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ವಿ. ಆಯ್ಕೆ
Update: 2025-01-05 13:48 GMT
ಕುಂದಾಪುರ: ಕುಂದಾಪುರ ಪುರಸಭೆಯ ಮೂರನೇ ಅವಧಿಯ ಸ್ಥಾಯೀ ಸಮಿತಿ ಅಧ್ಯಕ್ಷರಾಗಿ ಆಡಳಿತ ಪಕ್ಷದ ಸದಸ್ಯ ಪ್ರಭಾಕರ್ ವಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶನಿವಾರ ಪುರಸಭೆಯ ಸಭಾಂಗಣದಲ್ಲಿ ನಡೆಯಿತು. ಪುರಸಭೆ ಮುಖ್ಯಾಧಿಕಾರಿ ಆನಂದ ಜೆ. ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.
ಪುರಸಭೆ ಅಧ್ಯಕ್ಷ ಮೋಹನ್ ದಾಸ್ ಶೆಣೈ ಅಭಿನಂದಿಸಿದರು. ಸದಸ್ಯರಾದ ರಾಘವೇಂದ್ರ ಖಾರ್ವಿ, ಚಂದ್ರಶೇಖರ್ ಖಾರ್ವಿ ಶುಭಹಾರೈಸಿದರು. ಉಪಾಧ್ಯಕ್ಷೆ ವನಿತಾ ಎಸ್.ಬಿಲ್ಲವ, ಸದಸ್ಯರಾದ ದೇವಕಿ ಸಣ್ಣಯ್ಯ, ಶ್ವೇತಾ ಸಂತೋಷ್, ಶೇಖರ್ ಪೂಜಾರಿ, ಆಶಕ್ ಕೋಡಿ, ಶ್ರೀಧರ್ ಶೇರೆಗಾರ್, ಅಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.