ಮಜೂರು ಗ್ರಾಪಂ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾಗಿ ಮಂಜುಳಾ ಆಚಾರ್ಯ

Update: 2023-08-18 16:20 GMT

ಶಿರ್ವ, ಆ.18: ಕಾಪು ತಾಲೂಕು ಮಜೂರು ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ರಾದ ಪ್ರಸಾದ್ ಶೆಟ್ಟಿ ವಳದೂರು ಮತ್ತು ಉಪಾಧ್ಯಕ್ಷರಾಗಿ ಮಂಜುಳಾ ಆಚಾರ್ಯ ಹೇರೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 13 ಸದಸ್ಯ ಬಲದ ಮಜೂರು ಗ್ರಾಪಂ ನಲ್ಲಿ 9 ಬಿಜೆಪಿ ಬೆಂಬಲಿತ, 4 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನವು ಸಾಮಾನ್ಯ ಪುರುಷ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News