ನಮ್ಮ ವಿದ್ಯಾರ್ಥಿನಿಯರ ರಕ್ಷಣೆ ಮುಖ್ಯ: ಶೋಭಾ ಕರಂದ್ಲಾಜೆ

Update: 2023-07-28 16:52 GMT

ಉಡುಪಿ: ಉಡುಪಿಯ ಕಾಲೇಜೊಂದರ ಶೌಚಾಲಯಲ್ಲಿ ನಡೆದ ಶೂಟಿಂಗ್ ಘಟನೆ ದೇಶದ ಗಮನ ಸೆಳೆದಿದೆ. ಹಿಜಾಬ್ ಬಳಿಕ ಇದೀಗ ವೀಡಿಯೋ ಬಗ್ಗೆ ಚರ್ಚೆ ಆಗುತ್ತಿದೆ. ನಮಗೆ ನಮ್ಮ ವಿದ್ಯಾರ್ಥಿನಿಯರ ರಕ್ಷಣೆ ಮುಖ್ಯವಾಗಿದೆ. ಖಾಸಗಿ ವಿಚಾರ ಹೊರಗಡೆ ಹರಿದಾಡಿ ದುರ್ಬಳಕೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನಪ್ರತಿನಿಧಿಗಳು ,ಡಿಸಿ, ಎಸ್‌ಪಿಗೆ ವಿದ್ಯಾರ್ಥಿನಿಯರು ಮಾಹಿತಿ ನೀಡಿದ್ದಾರೆ. ಲಂಚ್ ಬ್ರೇಕ್ ಟೈಮಲ್ಲಿ ವಿದ್ಯಾರ್ಥಿಗಳು ಕಾಲೇಜ್ ಕ್ಯಾಂಪಸ್‌ಗೆ ಬರುತ್ತಿದ್ದರು. ಎಲ್ಲಾ ಸಿಸಿಟಿವಿ ದೃಶ್ಯ, ಮೊಬೈಲ್‌ಗಳೆಲ್ಲವನ್ನು ಎಫ್‌ಎಸ್‌ಎಲ್ ಗೆ ಕಳುಹಿಸಬೇಕು. ಯಾರನ್ನೂ ಇಲ್ಲಿ ರಕ್ಷಿಸುವ ಪ್ರಶ್ನೆ ಇಲ್ಲ. ಆದಷ್ಟು ಬೇಗ ಈ ಘಟನೆಯ ತನಿಖೆ ಆಗಬೇಕು ಆರೋಪಿಗಳಿಗೆ ಶಿಕ್ಷೆ ಆಗಬೇಕು ಎಂದರು.

ಇಲ್ಲಿ ಪಕ್ಷ, ಸರಕಾರ ಯಾವುದು ಎಂಬುದು ಮುಖ್ಯ ಅಲ್ಲ. ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಇದು. ಯಾವುದೇ ಹಾಸ್ಟೆಲ್ ಕಾಲೇಜು ವಸತಿ ಶಾಲೆಯಲ್ಲಿ ಯಾರೇ ಹೀಗೆ ಮಾಡಿದ್ರೂ ನನ್ನ ಗಮನಕ್ಕೆ ತನ್ನಿ. ನಾನು ನಿಮ್ಮ ಅಕ್ಕನಾಗಿ ವಿನಂತಿ ಮಾಡುತ್ತೇನೆ. ಮಾಹಿತಿ ನೀಡಿದವರನ್ನು ಗೌಪ್ಯವಾಗಿ ಇಟ್ಟು ನಿಮ್ಮನ್ನು ರಕ್ಷಣೆ ಮಾಡುತ್ತೇನೆ. ಲವ್ ಜಿಹಾದ್ ಮತಾಂತರ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಕೇಂದ್ರ ಗೃಹ ಸಚಿವರ ಗಮನಕ್ಕೂ ತಂದು ನಾನು ನ್ಯಾಯ ಕೊಡಿಸುತ್ತೇವೆ ಎಂದರು.

ಈ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ ರಾಜಕೀಯ ಮಾಡಲು ಸದ್ಯ ಯಾವುದೇ ಚುನಾವಣೆ ಇಲ್ಲ ನಮ್ಮ ವಿದ್ಯಾರ್ಥಿನಿಯರ ಮಾನ ಪ್ರಾಣದ ಪ್ರಶ್ನೆ. ಘಟನೆ ಏನು ಸತ್ಯಾಸತ್ಯತೆ ಏನು ಅದು ಹೊರಗೆ ಬರಬೇಕು ನನ್ನ ಕ್ಷೇತ್ರದ ವಿದ್ಯಾರ್ಥಿಗಳ ರಕ್ಷಣೆ ಆಗಬೇಕು ಅವರಿಗೆ ನ್ಯಾಯ ಸಿಗಬೇಕು ಎಂದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News