ಬೆಳೆ ಹಾನಿಯಾದ ರೈತರ ಮಾಹಿತಿ ಪ್ರಕಟ; ಆಕ್ಷೇಪಣೆಗಳಿಗೆ ಆಹ್ವಾನ
Update: 2024-09-05 14:21 GMT
ಉಡುಪಿ, ಸೆ.5: ಸರಕಾರದ ಆದೇಶದಂತೆ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಾದ ಪ್ರವಾಹ ಹಾಗೂ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿಗೆ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆ ಹಾನಿಯಾದ ರೈತರ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಕುಂದಾಪುರದ ಉಪವಿಭಾಗಾಧಿಕಾರಿಗಳ ಕಚೇರಿ, ತಾಲೂಕು ಗಳಲ್ಲಿರುವ ತಹಶೀಲ್ದಾರ್‌ರ ಕಚೇರಿ, ಗ್ರಾಮ ಪಂಚಾಯತ್ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.
ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ, ಸಂಬಂಧಿಸಿದ ತಹಶೀಲ್ದಾರ್ ಕಛೇರಿ, ಕೃಷಿ ಅಥವಾ ತೋಟಗಾರಿಕೆ ಇಲಾಖೆಗಳಲ್ಲಿ ಮುಂದಿನ 7 ದಿನದೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಗಳ ಕಚೇರಿ ಪ್ರಕಟಣೆ ತಿಳಿಸಿದೆ.