ಕಾರ್ಕಳ ಯುವತಿಯ ಅತ್ಯಾಚಾರ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ಮೊಹಮ್ಮದ್ ಶರೀಫ್

Update: 2024-08-24 17:43 GMT

ಕಾರ್ಕಳ: ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರವು ಮಾನವ ಸಮುದಾಯದ ಮೇಲೆ ನಡೆದಂತಹ ಅತ್ಯಾಚಾರ. ಇದನ್ನು ಖಂಡಿತವಾಗಿಯೂ ಸಹಿಸಲು ಸಾಧ್ಯವಿಲ್ಲ. ಯುವತಿಯನ್ನು ಪುಸಲಾಯಿಸಿ ಕರೆದೊಯ್ದು ಮಾದಕ ದ್ರವ್ಯ ನೀಡಿ ಅತ್ಯಾಚಾರ ಎಸಗಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಮೊಹಮ್ಮದ್ ಶರೀಫ್ ಹೇಳಿದರು.

ಅವರು ಕಾರ್ಕಳದ ಪ್ರಕಾಶ್ ಹೋಟೆಲ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೊಹಮ್ಮದ್ ಶರೀಪ್, ಪ್ರಕರಣಕ್ಕೆ ಸಂಬಂದಿಸಿ ಈಗಾಗಲೇ ಆರೋಪಿ ಅಲ್ತಾಫ್ ಬಂಧನವಾಗಿದೆ. ಇಂತಹ ಅಮಾನವೀಯ ಕೃತ್ಯಕ್ಕೆ ನಾಗರೀಕ ಸಮುದಾಯ ಹೊಣೆಗಾರರಲ್ಲ. ಆರೋಪಿಗೆ ಸೂಕ್ತ ಕಾನೂನಿನ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. 

ಕಾರ್ಕಳದಲ್ಲಿ ಹಿಂದೂ ಮುಸ್ಲಿಂ ಬೇದಭಾವವಿಲ್ಲದೆ ಸೌಹಾರ್ದತೆಯ ಜೀವನ ನಡೆಸುತ್ತಿದ್ದೇವೆ. ಮುಸ್ಲಿಂ ಸಮುದಾಯ ಎಂದಿಗೂ ಆರೋಪಿಯ ಬೆಂಬಲಕ್ಕೆ ನಿಲ್ಲುವುದಿಲ್ಲ ಎಂದು ಹೇಳಿದರು. ಆರೋಪಿ ಈ ಹಿಂದೆ ಹಲವಾರು ಇಂಥದೇ ಪ್ರಕರಣ ಗಳಲ್ಲಿ ಭಾಗಿಯಾಗಿದ್ದ, ಈ ಅತ್ಯಾಚಾರ ಪ್ರಕರಣದಲ್ಲಿ ಡ್ರಗ್ ಮಾಫಿಯಾಗಳ ಪಾತ್ರ ಎದ್ದು ಕಾಣುತ್ತಿದೆ. ಜಿಲ್ಲೆಯಾದ್ಯಂತ ವ್ಯಾಪಕವಾಗಿ ಕಾರ್ಯಾಚರಿಸುತ್ತಿರುವ ಡ್ರಗ್ ಮಾಫಿಯಾವನ್ನು ಹತ್ತಿಕ್ಕುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡಬೇಕಿದೆ ಎಂದರು.

ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರ ಕಾರ್ಯ ಶ್ಲಾಘನೀಯ ಕೇವಲ ಒಂದೇ ಗಂಟೆಯಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕಾರ್ಕಳ ಅಧ್ಯಕ್ಷ ಮೊಹಮ್ಮದ್ ಗೌಸ್, ಕಾರ್ಕಳ ಮುಸ್ಲಿಂ ಜಮಾತ್ ಅಧ್ಯಕ್ಷ ಅಶ್ಫಾಕ್ ಅಹಮದ್, ಕರ್ನಾಟಕ ಮುಸ್ಲಿಂ ಜಮಾತ್ ಕಾರ್ಕಳ ಅಧ್ಯಕ್ಷ ನಾಸಿರ್ ಶೇಖ್, ಕಾರ್ಕಳ ಮುಸ್ಲಿಂ ಫೆಡರೇಷನ್ ಅಧ್ಯಕ್ಷ ಶಬ್ಬೀರ್ ಅಹಮದ್, ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ಇಕ್ಬಲ್ ಅಹಮದ್, ಜೆಸಿಸ್ ವಲಯ ಚೇರ್ಮನ್ ಸಮದ್ ಖಾನ್, ಸೇವಾದಳ ಕಾರ್ಕಳ ಅಧ್ಯಕ್ಷ ಅಬ್ದುಲ್ಲಾ ಶೇಖ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News