ಎಂಆರ್‌ಎಫ್ ಕೇಂದ್ರಕ್ಕೆ ರೇಜು ಭೇಟಿ
Update: 2023-09-07 15:46 GMT
ಉಡುಪಿ, ಸೆ.7: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ. ರೇಜು ಅವರು ಇಂದು ಅಲೆವೂರಿನಲ್ಲಿರುವ ನಗರಸಭೆಯ ಎಂ.ಆರ್.ಎಫ್. ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಅಲ್ಲದೇ ಅವರು ಹಿರಿಯಡ್ಕ ಸಮೀಪದ ಅಂಗನವಾಡಿ ಕೇಂದ್ರವೊಂದಕ್ಕೂ ಭೇಟಿ ನೀಡಿದ್ದು, ಅಲ್ಲಿನ ಮಕ್ಕಳೊಂದಿಗೆ ಕೆಲಕಾಲ ಕಳೆದು ಮಾಹಿತಿಗಳನ್ನು ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ನಗರಸಭೆಯ ಪೌರಾಯುಕ್ತ ರಾಯಪ್ಪ ಮತ್ತಿತರರು ಉಪಸ್ಥಿತರಿದ್ದರು.