ಜಯಕರ ಶೆಟ್ಟಿ ಇಂದ್ರಾಳಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ

Update: 2024-09-09 16:16 GMT

ಉಡುಪಿ, ಸೆ.9: ಕರ್ನಾಟಕ ಶ್ರೀಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಜಿಲ್ಲಾ ಘಟಕವು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ನೀಡುವ ವಾರ್ಷಿಕ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸೆ.16ರ ಸೋಮವಾರದಂದು ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಪ್ರಶಸ್ತಿ ಪತ್ರ, ಬೆಳ್ಳಿ ಪದಕ, ಫಲಕವನ್ನು ನೀಡಿ ಗೌರವಿಸಲಾಗುವುದು ಎಂದರು.

ಕನ್ನಡ ನಾಡು, ನುಡಿ, ಸಂಸ್ಕೃತಿಯೊಂದಿಗೆ ಸಾಮಾಜಿಕ ಕ್ಷೇತ್ರದಲ್ಲಿ ಅವರು ಮಾಡಿದ ವಿಶೇಷ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದ ಚಿಕ್ಕಮಠ, ನಾಲ್ಕನೇ ವರ್ಷದಲ್ಲಿ ತಮ್ಮ ಸಂಘಟನೆ ಈ ಪ್ರಶಸ್ತಿಯನ್ನು ನೀಡುತ್ತಿದೆ. ಹಿಂದಿನ ವರ್ಷಗಳಲ್ಲಿ ಯೋಧ ಕೃಷ್ಣಪ್ಪ, ಸಮಾಜ ಸೇವಾಕರ್ತರಾದ ರವಿ ಕಟಪಾಡಿ ಹಾಗೂ ಈಶ್ವರ ಮಲ್ಪೆ ಅವರಿಗೆ ನೀಡಿ ಗೌರವಿಸಲಾಗಿತ್ತು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್., ರಾಯಣ್ಣ ಅಭಿಮಾನಿ ಬಳಗದ ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್ ಹಾಗೂ ಪ್ರಭಾಕರ ಪೂಜಾರಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News