ಪಡುಬಿದ್ರಿ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಹೆಜಮಾಡಿಯಲ್ಲಿ ಸುಂಕ ವಿನಾಯಿತಿ ನೀಡುವಂತೆ ಮನವಿ

Update: 2025-03-24 20:37 IST
ಪಡುಬಿದ್ರಿ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಹೆಜಮಾಡಿಯಲ್ಲಿ ಸುಂಕ ವಿನಾಯಿತಿ ನೀಡುವಂತೆ ಮನವಿ
  • whatsapp icon

ಉಡುಪಿ: ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪಡುಬಿದ್ರಿ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕೆಂದು ಆಗ್ರಹಿಸಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಇಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹಾಗೂ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜಮಾಡಿಯಲ್ಲಿ ಹಲವಾರು ವರ್ಷಗಳಿಂದ ಟೋಲ್ ಗೇಟ್ ನಿರ್ಮಾಣಗೊಂಡು ಸುಂಕ ವಸೂಲಾತಿಯನ್ನು ಮಾಡುತ್ತ ಬರಲಾಗುತ್ತಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಸ್ತಾನ ಟೋಲ್ ಗೇಟ್‌ನಲ್ಲಿ ಕೋಟ ಜಿಪಂ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಿದ್ದು, ಅದರಂತೆ ಹೆಜಮಾಡಿ ಟೋಲ್ ಗೇಟ್‌ನಲ್ಲಿ ಪಡುಬಿದ್ರಿ ಜಿಪಂನ ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಪಕ್ಷದ ಹಿರಿಯರಾದ ರಮಕಾಂತ್ ಪಡುಬಿದ್ರಿ, ಮುಖಂಡರಾದ ಮಿಥುನ್ ಹೆಗ್ಡೆ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News