ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Update: 2024-08-30 22:01 IST
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ
  • whatsapp icon

ಕಾರ್ಕಳ: ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಟ್ಟು 10 ಲಕ್ಷ ರೂ. ಮೌಲ್ಯದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದ ಉದ್ಘಾಟನೆ ಬೈಲೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಸುನೀಲ್ ಕುಮಾರ್ ಉದ್ಘಾಟಿಸಿದರು. ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸ್ಥಾಪಕರಲ್ಲಿ ಓರ್ವರಾದ ಗಣರಾಜ್ ಶೆಟ್ಟಿ ಅವರು ಮಾತನಾಡಿ, ಶಿಕ್ಷಣ ನಮಗೇನು ಕೊಟ್ಟಿದೆ ಅನ್ನುವುದಕ್ಕಿಂತ ಕಲಿತ ಶಿಕ್ಷಣದಿಂದ ಸಮಾಜಕ್ಕೆ ನಾವೇನು ನೀಡಿದ್ದೇವೆ ಎನ್ನುವುದು ಮುಖ್ಯ. ಮುಂದಿನ ದಿನಗಳಲ್ಲಿ ಅವಿನಾಶ್ ಶೆಟ್ಟಿಯವರ ಜತೆ ಕೈ ಜೋಡಿಸುವುದಾಗಿ ಭರವಸೆ ನೀಡಿದರು.

ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯ ಸುಮಿತ್ ಶೆಟ್ಟಿ ಕೌಡೂರು ಪ್ರಾಸ್ತಾವಿಕ ಮಾತನಾಡಿದರು. ಕೃಷ್ಣ ರಾಜ್ ಹೆಗ್ಡೆ, ಪ್ರಶಾಂತ್ ಶೆಟ್ಟಿ, ಮೋಹನ್ ಶೆಟ್ಟಿ, ತ್ರಿವಿಕ್ರಮ್ ಕಿಣಿ, ಮಾಲಿನಿ ಜೆ ಶೆಟ್ಟಿ, ಸಂತೋಷ್ ವಾಗ್ಲೆ, ಕನಸುಗಾರ ನವೀನ್ ಬೈಲೂರ್ ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕ ವಸಂತ್ ಎಂ. ಕಾರ್ಯಕ್ರಮ ನಿರ್ವಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News