ವಿದೇಶಿ ವ್ಯಾಸಂಗಕ್ಕೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

Update: 2023-10-25 15:45 GMT

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿ.ಜಿ ವ್ಯಾಸಂಗ ಮಾಡಲು ಹಣಕಾಸಿನ ನೆರವು (ವಿದ್ಯಾರ್ಥಿವೇತನ ರೂಪದಲ್ಲಿ) ನೀಡಲು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ - https://sevasindhu.karnataka.gov.in- ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವೆಬ್‌ಸೈಟ್ - https://dom.karnataka.gov.in- ಅಥವಾ ಸಹಾಯವಾಣಿ ಸಂಖ್ಯೆ:8277799990ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News