ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಮಾಲೋಚನಾ ಸಭೆ

Update: 2024-08-24 16:17 GMT

ಉಡುಪಿ, ಆ.24: ಉಡುಪಿ ಜಿಲ್ಲಾ ವ್ಯಾಪ್ತಿಯ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಈ ತಿಂಗಳಲ್ಲಿ ನಡೆಯಲಿರುವ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣಾ ಪ್ರಕ್ರಿಯೆಯ ಬಗ್ಗೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಸಮಾಲೋಚನಾ ಸಭೆ ಯನ್ನು ನಡೆಸಲಾಯಿತು.

ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣಾ ಮೇಲುಸ್ತುವಾರಿ ಯಾಗಿ ಕೆಪಿಸಿಸಿಯಿಂದ ನಿಯುಕ್ತಿಗೊಂಡಿರುವ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಈ ಸಭೆಯಲ್ಲಿ ಕಾಪು, ಕಾರ್ಕಳ, ಕುಂದಾಪುರ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯಿತ್‌ನ ಚುನಾಯಿತ ಕಾಂಗ್ರೆಸ್ ಸದಸ್ಯರುಗಳ ಮಾಹಿತಿ ಪಡೆದು ಅಧಿಕಾರಕ್ಕೇರುವ ಅವಕಾಶವಿದ್ದಲ್ಲಿ ಕೈಚೆಲ್ಲದಂತೆ ಎಲ್ಲಾ ರೀತಿಯಲ್ಲೂ ಕಾರ್ಯತಂತ್ರ ರೂಪಿಸುವಂತೆ ಐವನ್ ಡಿಸೋಜ ತಿಳಿಸಿದರು.

ವಿವಿಧ ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರಿಂದ ಅಭಿಪ್ರಾಯ ಸಂಗ್ರಹಿಸಿ, ಆಯಾ ಕ್ಷೇತ್ರದ ನಿಕಟಪೂರ್ವ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳು ಮತ್ತು ಬ್ಲಾಕ್ ಅಧ್ಯಕ್ಷರುಗಳ ಮುತುವರ್ಜಿಯಲ್ಲಿ ಚುನಾವಣಾ ಪ್ರಕ್ರಿಯೆ ಗಳನ್ನು ನಡೆಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್‌ಕುಮಾರ ಕೊಡವೂರು, ಪ್ರಸಾದ್‌ರಾಜ್ ಕಾಂಚನ್, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪ್ರಮುಖರಾದ ಹರೀಶ್ ಕಿಣಿ, ರಮೇಶ್ ಕಾಂಚನ್, ಪ್ರಶಾಂತ್ ಜತ್ತನ್ನ, ಶರ್ಫುದ್ದೀನ್ ಶೇಖ್, ಸತೀಶ್ ಕೊಡವೂರು, ದೇವಕಿ ಸಣ್ಣಯ್ಯ, ಉದ್ಯಾವರ ನಾಗೇಶ್ ಕುಮಾರ್, ಕಿರಣ್ ಹೆಗ್ಡೆ, ಹಮೀದ್, ಪ್ರಭಾಕರ ಆಚಾರಿ, ಸೌರಭ್ ಬಲ್ಲಾಳ್, ಮಹೇಶ್ ಸುವರ್ಣ, ಗಣೇಶ್ ನೆರ್ಗಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News