ಉಡುಪಿಯಲ್ಲಿ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ

Update: 2025-01-25 10:18 IST
ಉಡುಪಿಯಲ್ಲಿ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ

ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿರುವ ಆರೋಪಿಯ ಫೋಟೋ


  • whatsapp icon

ಉಡುಪಿ: ಐದು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ.

ಸುಮಾರು 30 ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.

ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಘಟನೆಯ ಮಾಹಿತಿ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೊತೆ ಮಾತನಾಡಿ ಘಟನೆಯ ವಿವರ ಪಡೆದಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಯನ್ನು ತಕ್ಷಣ ಪತ್ತೆ ಹಚ್ಚಬೇಕು. ಜೊತೆಗೆ, ಬಾಲಕಿಗೆ ಅಗತ್ಯವಾದ ಎಲ್ಲ ನೆರವನ್ನು ನೀಡಬೇಕು ಎಂದು ಸಚಿವರು ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಸೂಚನೆ ನೀಡಿದ್ದಾರೆ.

ಆರೋಪಿಯ ಬಗ್ಗೆ ಮಾಹಿತಿಗೆ ಮನವಿ

ಬಾಲಕಿಯ ಲೈಂಗಿಕ ಕಿರುಕುಳ ಪ್ರಕರಣದ ಶಂಕಿತ ಆರೋಪಿಯ ಫೋಟೋ ಸ್ಥಳೀಯ ಸಿಸಿ‌ಟಿವಿ ಕ್ಯಾಮರಾದಲ್ಲಿ ದಾಖಲಾಗಿದ್ದು ಈತನ ಬಗ್ಗೆ ಸಾರ್ವಜನಿಕರು ಯಾವುದೇ ಮಾಹಿತಿಯಿದ್ದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ಕಂಟ್ರೋಲ್ ರೂಮ್ : 9480805400

ಪೊಲೀಸ್ ನಿರೀಕ್ಷಕರು, ಮಹಿಳಾ ಠಾಣೆ : 9480805430

ಮಹಿಳಾ ಠಾಣೆ : 08202525599

ಪೊಲೀಸ್ ಉಪನಿರೀಕ್ಷಕರು, ಮಹಿಳಾ ಠಾಣೆ : 8277988949



 


Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News