ಜನತಾ ದರ್ಶನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ: ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Update: 2023-10-16 14:40 GMT

ಉಡುಪಿ, ಅ.16: ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಹವಾಲುಗಳನ್ನು ಸಲ್ಲಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರೋ ಪಾಯಗಳನ್ನು ಕಂಡುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಹೇಳಿದ್ದಾರೆ.

ಸೋಮವಾರ ಕಾಪು ಆಡಳಿತ ಸೌಧದಲ್ಲಿ, ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭೆ ಇವರ ಸಹಯೋಗದೊಂದಿಗೆ ನಡೆದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಜನರು ಇರುವಲ್ಲಿಗೆ ಬಂದು ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದಲೇ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾ ಗುತ್ತಿದೆ. ಜನರು ಸಲ್ಲಿಸಿದ ಅಹವಾಲುಗಳನ್ನು ಅಧಿಕಾರಿಗಳ ವ್ಯಾಪ್ತಿಯಲ್ಲಿ ನಿಯಮಾನುಸಾರ ಬಗೆಹರಿಸುವಂತಹವುಗಳನ್ನು ಸ್ಥಳೀಯವಾಗಿ ಬಗೆಹರಿಸ ಲಾಗುತ್ತದೆ. ಒಂದೊಮ್ಮೆ ಅವು ಅನುದಾನ ಪೂರಕವಾಗಿದ್ದಲ್ಲಿ ಅಥವಾ ಸರಕಾರದ ಮಟ್ಟದಲ್ಲಿ ಬಗೆಹರಿಸುವಂತಾಗಿದ್ದಲ್ಲಿ ಸರಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸಲಾಗು ವುದು. ಜನರು ಅರ್ಜಿ ಸಲ್ಲಿಸುವಾಗ ಕಾನೂನಿನ ಅಡಿಯಲ್ಲಿ ಬಗೆಹರಿಸಲು ಸಾಧ್ಯವೇ ಎಂದು ಅರ್ಥೈಸಿಕೊಂಡು ಅರ್ಜಿ ಸಲ್ಲಿಸುವುದು ಒಳಿತು ಎಂದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕಾಪು ವಿಧಾನಸಭಾ ವ್ಯಾಪ್ತಿಯು ಎರಡು ತಾಲೂಕುಗಳನ್ನು ಒಳಗೊಂಡು ಭೌಗೋಳಿಕವಾಗಿ ಹೆಚ್ಚಿನ ವಿಸ್ತೀರ್ಣ ಹೊಂದಿದೆ. ಜನರ ಸಮಸ್ಯೆಗಳನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಜಿಲ್ಲಾಧಿಕಾರಿ ಗಳು ಬಗೆಹರಿಸಲು ಮುಂದಾಗಬೇಕು. ಜನರು ಸಹ ಇದಕ್ಕೆ ಸ್ಪಂದಿಸಬೇಕು. ಸ್ಥಳೀಯವಾಗಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಜನರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗಲಿದೆ ಎಂದರು.

47 ಅರ್ಜಿ ಸಲ್ಲಿಕೆ: ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ 16, ಸ್ಥಳೀಯ ಸಂಸ್ಥೆಗಳ (ಅರ್ಬನ್ ಡೆವಲಪ್‌ಮೆಂಟ್) 11, ಭೂಮಾಪನ ಇಲಾಖೆಯ 6, ಗ್ರಾಮೀಣ ಕುಡಿಯುವ ನೀರು ಇಲಾಖೆಯ 3, ಕೆಐಡಿಬಿಗೆ ಸಂಬಂಧಿಸಿದಂತೆ 3, ಪೊಲೀಸ್ ಇಲಾಖೆಯ 2, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 1, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ 1, ಸಣ್ಣ ನೀರಾವರಿ ಇಲಾಖೆಯ 1, ಪಂಚಾಯತ್‌ರಾಜ್ ಇಲಾಖೆಯ 1, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ 1 ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯ 1 ಸೇರಿದಂತೆ ಒಟ್ಟು 47 ಅರ್ಜಿಗಳನ್ನು ಸಾರ್ವಜನಿಕರು ಸಲ್ಲಿಸಲಾಗಿತ್ತು.

ಸಾಮಾನ್ಯವಾಗಿ ರಸ್ತೆ ಸಂಪರ್ಕ ಕಲ್ಪಿಸುವ, ಖಾತೆ ಬದಲಾವಣೆ, ಭೂ ಸ್ವಾಧೀನ ಪ್ರಕ್ರಿಯೆಯ ಪರಿಹಾರ, ಸರ್ವೇ ಕಾರ್ಯ ಕೈಗೊಳ್ಳುವ ಬಗ್ಗೆ, ಅಕ್ರಮ ಸಕ್ರಮ ಮಂಜೂರಾತಿ ಪತ್ರ ನೀಡುವ ಅಹವಾಲುಗಳನ್ನು ಸಲ್ಲಿಸಲಾಗಿತ್ತು.

ಇದೇ ಸಂದರ್ಭದಲ್ಲಿ ವಿವಿಧ ಫಲಾನುಭಗಳಿಗೆ ಸಾಗುವಳಿ ಚೀಟಿ, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಅಡಿ ಆದೇಶ ಪತ್ರ, ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಮಂಜೂರಾತಿ ಆದೇಶ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ, ಕುಂದಾಪುರ ಉಪ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಉದಯ್ ನಾಯಕ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಸಿದ್ದಲಿಂಗಪ್ಪ, ಕಾಪು ತಹಶೀಲ್ದಾರ್ ನಾಗರಾಜ್ ನಾಯ್ಕ್ ಅಲ್ಲದೇ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.






 


 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News