ಅ.30, 31ರಂದು ದೀಪಾವಳಿ ಪ್ರಯುಕ್ತ ಬೆಂಗಳೂರು-ಕಾರವಾರ ನಡುವೆ ವಿಶೇಷ ರೈಲು ಸಂಚಾರ

Update: 2024-10-18 13:22 GMT

ಉಡುಪಿ, ಅ.18: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಜನದಟ್ಟಣೆಯನ್ನು ನಿಭಾಯಿಸುವ ದೃಷ್ಟಿಯಿಂದ ಕೊಂಕಣ ರೈಲು ಮಾರ್ಗದಲ್ಲಿ ಬೆಂಗಳೂರು ಹಾಗೂ ಕಾರವಾರ ನಡುವೆ ಅ.30 ಹಾಗೂ 31ರಂದು ವಿಶೇಷ ರೈಲು ಸಂಚರಿಸಲಿದೆ ಎಂದು ಕೊಂಕಣ ರೈಲ್ವೆ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ರೈಲು ನಂ.06597 ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಹಾಗೂ ಕಾರವಾರ ನಡುವಿನ ಎಕ್ಸ್‌ಪ್ರೆಸ್ ರೈಲು ಅ.30 ಬುಧವಾರದಂದು ಅಪರಾಹ್ನ 1:00ಗಂಟೆಗೆ ಬೆಂಗಳೂರಿನಿಂದ ಪ್ರಯಾಣ ಆರಂಭಿಸಲಿದ್ದು ಗುರುವಾರ ಮುಂಜಾನೆ 4ಗಂಟೆಗೆ ಕಾರವಾರ ತಲುಪಲಿದೆ.

ಅದೇ ರೀತಿ ರೈಲು ನಂ.06598 ಕಾರವಾರ- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿಲ್ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಅ.31ರ ಗುರುವಾರ ಅಪರಾಹ್ನ 12:00ಗಂಟೆಗೆ ಕಾರವಾರದಿಂದ ಪ್ರಯಾಣ ಬೆಳೆಸಲಿದ್ದು , ಶುಕ್ರವಾರ ಮುಂಜಾನೆ 4:00ಗಂಟೆಗೆ ಬೆಂಗಳೂರು ತಲುಪಲಿದೆ.

ಈ ರೈಲಿಗೆ ಚಿಕ್ಕಬಾಣಾವರ, ಕುಣಿಗಲ್, ಚೆನ್ನರಾಯಪಟ್ಟಮ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟ, ಗೋಕರ್ಣ ರೋಡ್ ಹಾಗೂ ಅಂಕೋಲ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ. ಈ ರೈಲು 3ಟಯರ್ ಎಸಿ-2, ಸ್ಲೀಪರ್ ಕೋಚ್-10, ಜನರಲ್ ಕೋಚ್-4, ಎಸ್‌ಎಲ್‌ಆರ್-2 ಸೇರಿದಂತೆ ಒಟ್ಟು 18 ಕೋಚ್‌ಗಳೊಂದಿಗೆ ಸಂಚರಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News