ವಿಕಲಚೇತನರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

Update: 2024-09-10 15:49 GMT

ಉಡುಪಿ, ಸೆ.10: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆ ಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ, ಸರಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೂ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉದ್ದೇಶಿಸಿದೆ.

ರಾಜ್ಯ ಪ್ರಶಸ್ತಿಗಾಗಿ ವೈಯಕ್ತಿಕ ವಿಭಾಗ, ವಿಶೇಷ ಶಿಕ್ಷಕರ ವಿಭಾಗ ಮತ್ತು ಸಂಸ್ಥೆಗಳ ವಿಭಾಗದಲ್ಲಿ ನಿಗದಿತ ನಮೂನೆಯಲ್ಲಿ ಪ್ರಸ್ತಾವನೆಗಳನ್ನು ದ್ವಿಪ್ರತಿಗಳಲ್ಲಿ ಹಾರ್ಡ್ ಕಾಪಿ ಹಾಗೂ ಸಾಫ್ಟ್ ಕಾಪಿ (ಎಂ.ಎಸ್ ಆಫೀಸ್‌ನಲ್ಲಿ ನುಡಿ-6 ಫಾಂಟ್‌ನಲ್ಲಿ) ಯೊಂದಿಗೆ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಛೇರಿ, ರಜತಾದ್ರಿ, ಮಣಿಪಾಲ, ಇಲ್ಲಿಗೆ ಅಕ್ಟೋಬರ್ 15ರ ಒಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574810ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News