ಭಯವನ್ನು ಗೆಲ್ಲಲು ಪ್ರಯತ್ನಿಸಿದರೆ ಯಶಸ್ಸು ಸಾಧ್ಯ: ಗುರುರಾಜ್ ಸನಿಲ್

Update: 2023-11-11 13:05 GMT

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಹಕಾರದಲ್ಲಿ ದಿ.ಪುಳಿಮಾರು ಎಂ.ಕೃಷ್ಣ ಶೆಟ್ಟಿ ದತ್ತಿ ಉಪನ್ಯಾಸ ಕಾರ್ಯಕ್ರಮ ಶನಿವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಪ್ರಸಿದ್ಧ ಉರಗ ತಜ್ಞ, ಸಾಹಿತಿ ಗುರುರಾಜ್ ಸನಿಲ್ ಮಾತನಾಡಿ, ಹಾವುಗಳ ಬಗ್ಗೆ ಬಹಳಷ್ಟು ತಪ್ಪು ನಂಬಿಕೆಗಳಿದ್ದು, ಅದನ್ನು ಹೋಗಲಾಡಿಸದಿದ್ದರೆ ಅದರ ಅಡ್ಡ ಪರಿಣಾಮ ಪರಿಸರ ಮತ್ತು ನಮ್ಮ ಮೇಲಾಗುವ ಸಾಧ್ಯತೆ ಇರುತ್ತದೆ ಎಂದರು.

ಭಯವನ್ನು ಗೆಲ್ಲಲಿಕ್ಕೆ ಪ್ರಯತ್ನಿಸಿದರೆ ಖಂಡಿತ ಯಶಸ್ಸು ಸಾಧ್ಯ. ತಮ್ಮ ಜೀವನದಲ್ಲಿ ಪ್ರಾರಂಭದಿಂದಲೇ ಭಯವನ್ನು ಹೋಗಲಾಡಿಸಿಕೊಳ್ಳಲು ಪ್ರಯತ್ನಿಸಬೇಕು ಅವರು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕೋಶಾಧಿಕಾರಿ ವಿ.ಮನೋಹರ್, ದತ್ತಿ ದಾನಿಗಳಾದ ಭವಾನಿ ವಿ.ಶೆಟ್ಟಿ, ಶಾರದಾ ಶೆಟ್ಟಿ, ಕಲಾ ವಿಭಾಗದ ಡೀನ್ ಡಾ.ನಿಕೇತನ, ಉಪನ್ಯಾಸಕ ಸೋಜನ್ ಕೆ.ಜಿ., ಎನ್‌ಎಸ್‌ಎಸ್ ಸಂಚಾಲಕ ವಿದ್ಯಾಕುಮಾರಿ ಉಪಸ್ಥಿತರಿದ್ದರು.

ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರಾಘವೇಂದ್ರ ಪ್ರಭು ಕರ್ವಾಲು ಪರಿಚಯಿಸಿದರು. ಕಸಾಪ ಉಡುಪಿ ತಾಲೂಕು ಗೌರವಾ ಕಾರ್ಯದರ್ಶಿ ಜನಾರ್ದನ ಕೊಡವೂರು ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News