ಪ್ರಾಮಾಣಿಕತೆ, ವಿನಮ್ರತೆ, ಕಠಿಣ ಪರಿಶ್ರಮದಿಂದ ಯಶಸ್ಸಿ: ವಿನೋದ್ ಜಾನ್

Update: 2024-09-10 12:24 GMT

ಕುಂದಾಪುರ, ಸೆ.10: ವಿದ್ಯಾರ್ಥಿಗಳು ಸ್ಮಾರ್ಟ್ ಗುರಿಗಳನ್ನು ಹೊಂದಬೇಕು. ಪ್ರಾಮಾಣಿಕತೆ, ವಿನಮ್ರತೆ ಮತ್ತು ಕಠಿಣ ಪರಿಶ್ರಮವು ಯಶಸ್ಸಿಗೆ ಪ್ರಮುಖ ದಾರಿಯಾಗಿದೆ. ಭವಿಷ್ಯದ ಸಾಧನೆಗಳು ನಿಮ್ಮ ಜೀವನದಲ್ಲಿ ನೀವು ಮಾಡುವ ಆಯ್ಕೆಗಳ ಮೇಲೆ ಮಾತ್ರ ಅವಲಂಬಿತವಾಗಿರುತ್ತದೆ ಎಂದು ಮಿರಾಪ್ರ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಹಾರ್ಡ್ವೇರ್ ಇಂಜಿನಿಯರಿಂಗ್ ಉಪಾಧ್ಯಕ್ಷ ವಿನೋದ್ ಜಾನ್ ಹೇಳಿದ್ದಾರೆ.

ಕುಂದಾಪುರ ಎಂಐಟಿಯ 17ನೇ ಬ್ಯಾಚ್ ಇಂಜಿನಿಯರಿಂಗ್ ವಿದ್ಯಾರ್ಥಿ ಗಳಿಗೆ ಸೆ.9ರಂದು ಹಮ್ಮಿಕೊಳ್ಳಲಾದ ಪದವಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಒರ್ಡ್ರಿಯೋ ಸಂಸ್ಥೆಯ ಸಂಸ್ಥಾಪಕ ಮತ್ತು ಸಿಇಒ ಸುಮಂತ್ ಶೆಟ್ಟಿ ಮಾತನಾಡಿ, ಪದವೀಧರರು ತಮ್ಮ ಗುರಿಗಳನ್ನು ತಲು ಪಲು ಇನ್ನೂ ಕೆಲವು ವರ್ಷಗಳವರೆಗೆ ಕಲಿಯಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಹಾಗೂ ವಿವಿಧ ವಿಭಾಗಳಲ್ಲಿ ಉನ್ನತ ಅಂಕ ಪಡೆದವರಿಗೆ ಪದಕಗಳನ್ನು ವಿತರಿಸಲಾಯಿತು.

ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ ಪದವಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಉಪಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿಸೋಜ ಪ್ರಮಾಣ ವಚನ ಬೋಧಿಸಿದರು. ಐಎಂಜೆ ಸಂಸ್ಥೆಗಳ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ.ರಾಮಕೃಷ್ಣ ಹೆಗಡೆ, ಕಾರ್ಯಕ್ರಮ ಸಂಯೋಜಕ ಪ್ರೊ.ಅಮೃತಮಾಲ ಮೊದಲಾದವರು ಉಪಸ್ಥಿತರಿದ್ದರು. ಪ್ರೊ.ಫರಾನಾ ಕಾರ್ಯಕ್ರಮ ನಡೆಸಿ ಕೊಟ್ಟರು. ಪ್ರಾಧ್ಯಾಪಕಿ ಶ್ರೀನಿಧಿ ಅತಿಥಿಗಳನ್ನು ಪರಿಚಯಿಸಿದರು. ಪ್ರಾಧ್ಯಾಪಕಿ ತಿಲಕಲಕ್ಷ್ಮಿ ಸ್ವಾಗತಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News