ಆರೋಗ್ಯಕರ ಸ್ಪರ್ಧೆಗಳಿಂದಲೇ ಪ್ರತಿಭೆಯ ಅನಾವರಣ ಸಾಧ್ಯ: ರಶ್ಮಿ ಭಟ್
ಉಡುಪಿ, ಸೆ.4: ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ವೃದ್ಧಿಸುತ್ತದೆ ಮತ್ತು ಪ್ರತಿಭೆಯ ಅನಾವರಣ ವಾಗು ತ್ತದೆ. ಆದುದರಿಂದ ವಿದ್ಯಾರ್ಥಿಗಳು ತಮಗೆ ಲಭಿಸಿರುವ ಭಾಗವಹಿಸುವ ಅವಕಾಶವನ್ನು ತಪ್ಪಿಸಿ ಕೊಳ್ಳಬಾರದು. ಸ್ಪರ್ಧಾತ್ಮಕ ವಾತಾವರಣದಲ್ಲಿ ಕಲಿಕೆಯೂ ಕೂಡ ವೇಗವಾಗಿ ಸಾಗುತ್ತಿರುತ್ತದೆ ಎಂದು ಉಡುಪಿ ನಗರಸಭಾ ಸದಸ್ಯೆ ರಶ್ಮಿ ಸಿ.ಭಟ್ ಹೇಳಿದ್ದಾರೆ.
ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ಶಾಲಾ ಶಿಕ್ಷಣ ಇಲಾಖೆ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಉಡುಪಿ ಇವುಗಳ ಸಹಭಾಗಿತ್ವದಲ್ಲಿ ಇತ್ತೀಚಿಗೆ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮುಖ್ಯ ಅತಿಥಿಗಳಾಗಿ ಉಡುಪಿ ಲಯನ್ಸ್ ಕ್ಲಬ್ ಅಧ್ಯಕ್ಷ ರವೀಶ್ ಚಂದ್ರ ಶೆಟ್ಟಿ ಶುಭ ಹಾರೈಸಿದರು. ಸಮಾರೋಪ ಸಮಾರಂಭದಲ್ಲಿ ಸಾಫಲ್ಯ ಟ್ರಸ್ಟ್‌ನ ಅಧ್ಯಕ್ಷೆ ರತ್ನ ಅಶೋಕ್ ಶೆಟ್ಟಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ವಿಜಯಕುಮಾರ್ ಮುದ್ರಾಡಿ, ನಿವೃತ್ತ ಪ್ರಾಂಶುಪಾಲೆ ಹಂಸವತಿ, ಎಸ್‌ಡಿಎಂಸಿ ಗೌರವಾಧ್ಯಕ್ಷೆ ತಾರಾದೇವಿ, ಅಧ್ಯಕ್ಷೆ ವಿನೋದಾ ಸುವರ್ಣ, ಸಾಫಲ್ಯ ಟ್ರಸ್ಟ್‌ನ ನಿರುಪಮಾ ಪ್ರಸಾದ್ ಶೆಟ್ಟಿ, ಹರಿಣಾ, ವಿಶ್ವನಾಥ ಬಾಯರಿ, ಬಿಆರ್‌ಪಿ ಮೀನಾ ಕುಮಾರಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿದರು. ಶಿಕ್ಷಕಿ ಪ್ರವೀಣ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ವಂದಿಸಿದರು.