ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳವು
Update: 2024-09-14 14:57 GMT
ಬೈಂದೂರು, ಸೆ.14: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಹಾಗೂ ಮೊಬೈಲ್ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಕೇರಳದ ಜಯಪ್ರಕಾಶ್ ಎಂಬವರು ತನ್ನ ಪತ್ನಿಯೊಂದಿಗೆ ಜು.25ರಂದು ಪನೆವೆಲ ನಿಂದ ಹರಿಪಾದಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದು, ಜು.26ರಂದು ಬೆಳಗಿನ ಜಾವ ರೈಲು ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣ ತಲುಪಿದ ವೇಳೆ, ಕಳ್ಳರು 36 ಗ್ರಾಂ ತೂಕದ ಚಿನ್ನಾಭರಣ ಮತ್ತು ಮೊಬೈಲ್ ಇದ್ದ ಅವರ ಪತ್ನಿಯ ಬ್ಯಾಗ್‌ನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.