ಸಮುದ್ರಕ್ಕೆ ಬಿದ್ದು ವ್ಯಕ್ತಿ ನಾಪತ್ತೆ

Update: 2023-08-19 14:11 GMT

ಉಡುಪಿ, ಆ.19: ಮಲ್ಪೆ ಧಕ್ಕೆಯಿಂದ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ಗೋಪಾಲ ಶನಿಯಾರ್ ನಾಯ್ಕ (35) ಎಂಬ ವ್ಯಕ್ತಿಯು ಆ.13 ರಂದು ಅಪರಾಹ್ನ 2:30ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ಆಕಸ್ಮಿಕ ವಾಗಿ ಸಮುದ್ರಕ್ಕೆ ಬಿದ್ದು, ಸಮುದ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಇವರ ಗುರುತು ಪತ್ತೆಯಾದಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447 ಹಾಗೂ ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದು ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News