ವ್ಯಕ್ತಿ ನಾಪತ್ತೆ

Update: 2024-09-23 16:01 GMT

ಉಡುಪಿ, ಸೆ.23: ನಗರದ ಕಡಿಯಾಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಜಯ ಶೆಟ್ಟಿ(57) ಎಂಬವರು ಸೆ.6ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿದ್ದಾರೆ.

157 ಸೆ.ಮೀ. ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News