ಚಂದ್ರಯಾನದ ಯಶಸ್ಸು; ಭಾರತ ಬಾಹ್ಯಾಕಾಶ ಲೋಕದ ಲೀಡರ್ ಎಂಬುದು ಸಾಬೀತು -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2023-08-23 16:23 GMT

ಉಡುಪಿ, ಆ.23: ಇಡೀ ವಿಶ್ವವೇ ತುದಿಗಾಲ ಮೇಲೆ ನಿಂತು ಕಾಯುತ್ತಿದ್ದ ಚಂದ್ರಯಾನ ಯಶಸ್ವಿಯಾಗಿದ್ದಕ್ಕೆ ಅತೀವ ಹರ್ಷ ವ್ಯಕ್ತಪಡಿಸಿರುವ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ಭಾರತೀಯ ವಿಜ್ಞಾನಿ ಗಳ ಸಾಮರ್ಥ್ಯವನ್ನು ತೋರಿಸಿದೆ. ಅವರಿಗೆ ನನ್ನ ಕೋಟಿ ಕೋಟಿ ವಂದನೆಗಳು, ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಇಸ್ರೋದ ಚಂದ್ರಯಾನ ಯಶಸ್ವಿಗೊಂಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಇಸ್ರೋ ಭಾರತದ ಹೆಮ್ಮೆಯ ಸಂಸ್ಥೆ. ಈ ಹಿಂದೆ ಕೂಡ ಹಲವಾರು ಮೈಲಿಗಲ್ಲುಗಳನ್ನು ಸಾಧಿಸಿದೆ. ಈಗ ಚಂದ್ರಯಾನದ ಯಶಸ್ಸು ಇಡೀ ವಿಶ್ವವೇ ಭಾರತ ವನ್ನು ಮತ್ತೊಮ್ಮೆ ಕೊಂಡಾಡುವಂತೆ ಮಾಡಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡರ್ ಇಳಿಸಿದ ಜಗತ್ತಿನ ಮೊದಲ ದೇಶ ವಾಗಿ ಭಾರತಕ್ಕೆ ಇಸ್ರೋ ಹೆಮ್ಮೆ ತಂದು ಕೊಟ್ಟಿದೆ. ಚಂದ್ರನ ಮೇಲೆ ಲ್ಯಾಂಡರ್‌ನ್ನು ಇಳಿಸುವ ಮೂಲಕ ಭಾರತ ಬಾಹ್ಯಾ ಕಾಶ ಲೋಕದ ಲೀಡರ್ ಎನ್ನುವುದನ್ನು ತೋರಿಸಿಕೊಟ್ಟಿದೆ ಎಂದರು.

ಚಂದ್ರಯಾನದ ಈ ಯಶಸ್ಸು ವಿಜ್ಞಾನ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಕ್ರಾಂತಿಕಾರಕ ಬೆಳವಣಿಗೆಗಳಿಗೆ ಕಾರಣೀಭೂತವಾ ಗಲಿದೆ. ಈ ಮಹತ್ಸಾಧನೆ ಗಾಗಿ ಮತ್ತೊಮ್ಮೆ ಎಲ್ಲ ವಿಜ್ಞಾನಿಗಳನ್ನು, ಇಡೀ ದೇಶದ ಜನತೆಯನ್ನು ಅಭಿನಂದಿಸುತ್ತೇನೆ ಎಂದು ಹೆಬ್ಬಾಳ್ಕರ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News