ಯುವತಿ ನಾಪತ್ತೆ

Update: 2023-09-21 15:23 GMT

ಉಡುಪಿ, ಸೆ.21: ಬೈಂದೂರು ತಾಲೂಕು ಹಾಲ್ಕಲ್, ಜಡ್ಕಲ್ ಗ್ರಾಮದ ತುಂಬೆಮಕ್ಕಿ ನಿವಾಸಿ ಮೈತ್ರಿ (23) ಎಂಬ ಯುವತಿ ಸೆ.20ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 3 ಇಂಚು ಎತ್ತರ, ದುಂಡು ಮುಖ, ಎಣ್ಣೆಗಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ:08254-258233, ಮೊ.ನಂ9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ. 9480805434, ಕಂಟ್ರೋಲ್ ರೂಂ :100, ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದು ಎಂದು ಕೊಲ್ಲೂರು ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News