ಯುವತಿ ನಾಪತ್ತೆ

Update: 2024-09-23 15:58 GMT

ಉಡುಪಿ, ಸೆ.23: ಮೂಲತಃ ದಾವಣಗೆರೆ ಜಿಲ್ಲೆ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಯುವತಿ ಆ. 23ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 3 ಇಂಚು ಎತ್ತರ, ಉದ್ದಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿ ಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News