ಮನೆಗೆ ನುಗ್ಗಿ ಸೊತ್ತು ಕಳವು

Update: 2023-10-29 11:31 GMT

ಮಣಿಪಾಲ, ಅ.29: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಅ.28ರಂದು ನಡೆದಿದೆ.

ಮಣಿಪಾಲದ ರಿಧಿ ಎಂಬವರ ಮನೆಗೆ ನುಗ್ಗಿದ ಕಳ್ಳರು 1,50,000ರೂ. ಮೌಲ್ಯ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಅದರಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News