ಉಡುಪಿ: ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಪ್ರಕರಣ; ಆರೋಪಿಗೆ ಜೈಲುಶಿಕ್ಷೆ, ದಂಡ
ಉಡುಪಿ, ಆ.9: ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಉಡುಪಿಯ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯವು ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.
ಬ್ರಹ್ಮಾವರ ತಾಲೂಕು ಹಾರಾಡಿ ಗ್ರಾಮದ ಕುಕ್ಕುಡೆ ಕೀರ್ತಿ ನಗರ್ ನಿವಾಸಿ ಸುಕೇಶ್ ಶಿಕ್ಷೆಗೆ ಗುರಿಯಾದ ಆರೋಪಿ.
ಈತ 2021ರ ಜ.3ರಂದು ಕೀರ್ತಿ ನಗರದಲ್ಲಿ ಬಸಪ್ಪ ಮತ್ತು ಅವರ ಮಗಳಾದ ಲಲಿತಾ ಎಂಬವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಮರದ ರೀಪಿನ ತುಂಡಿನಿಂದ ಹಲ್ಲೆ ಮಾಡಿದ್ದನು ಎಂದು ದೂರಲಾಗಿದೆ.
ಈ ಬಗ್ಗೆ ಬ್ರಹ್ಮಾವರ ಠಾಣೆಯ ಎಸ್ಸೈ ಗುರುನಾಥ್ ಬಿ. ತನಿಖೆ ನಡೆಸಿ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾ ಧೀಶ ಶ್ಯಾಮ್ ಪ್ರಕಾಶ್ ಆರೋಪಿಗೆ 3 ವರ್ಷದ ಕಾರಾಗೃಹ ಶಿಕ್ಷೆ ಮತ್ತು 10,000ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ.ಕೆ ವಾದ ಮಂಡಿಸಿದ್ದಾರೆ.