ಉಡುಪಿ ಪ್ರಕರಣದ ತನಿಖೆ ಆಳವಾಗಿ ನಡೆಸಲು ಸಿಐಡಿಗೆ ಹಸ್ತಾಂತರ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Update: 2023-08-08 04:07 GMT
ಉಡುಪಿ: ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣದ ತನಿಖೆ ಇನ್ನಷ್ಟು ಆಳವಾಗಿ ಮತ್ತು ಸ್ವತಂತ್ರವಾಗಿ ನಡೆಯಬೇಕೆಂಬ ಕಾರಣಕ್ಕೆ ಸಿಐಡಿಗೆ ಒಪ್ಪಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಪ್ರಕರಣ ಅತ್ಯಂತ ಸೂಕ್ಷ್ಮವಾಗಿದ್ದು, ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಷಯವಾಗಿದೆ. ಆದುದರಿಂದ ಸರಕಾರ ಮೊದಲಿಂದಲೂ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.