ಉಡುಪಿ ಕಾಲೇಜಿನ ವಿಡಿಯೊ ವಿವಾದ: ಸಮಗ್ರ ತನಿಖೆಗೆ ಆಗ್ರಹ
ಉಡುಪಿ: ಉಡುಪಿ ನಗರದ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೂವರು ವಿದ್ಯಾರ್ಥಿನಿಯರಿಂದ ಅನ್ಯ ತರಗತಿ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ತ್, ಬಜರಂಗ ದಳ ಉಡುಪಿ ಜಿಲ್ಲಾ ಘಟಕದಿಂದ ಪ್ರತಿಭಟನಾ ಪಾದಯಾತ್ರೆಯು ಜೋಡುಕಟ್ಟೆಯಿಂದ ರಾಜಾಂಗಣ ಬಳಿಯ ವಾಹನ ಪಾರ್ಕಿಂಗ್ ಪ್ರದೇಶದ ತನಕ ಗುರುವಾರ ನಡೆಯಿತು.
ಬಳಿಕ ಅಲ್ಲಿ ಬಹಿರಂಗ ಸಭೆ ನಡೆಯಿತು. ಕಲ್ಸಂಕದಿಂದ ಜೋಡುಕಟ್ಟೆ ತನಕ 700ಕ್ಕೂ ಅಧಿಕ ಪೊಲೀಸರು, 25ಕ್ಕೂಅಧಿಕ ವಾಹನಗಳನ್ನು ಬಿಗಿ ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿತ್ತು.
ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಉಡುಪಿ ಶಾಸಕ ಯಶ್‌ಪಾಲ್ ಎ.ಸುವರ್ಣ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಶ್ಮಿ ಸಾಮಂತ್, ಬಿ. ಸುಪ್ರಸಾದ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮನೋಹರ ಕಲ್ಮಾಡಿ, ರಾಜೇಶ್ ಕಾವೇರಿ ಕುಂದಾಪುರ, ಶ್ಯಾಮಲಾ ಕುಂದರ್, ಪೂರ್ಣಿಮಾ ನಾಯಕ್, ವಿಹಿಂಪ ಜಿಲ್ಲಾಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ ಪಾದೆಬೆಟ್ಟು, ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಸುನಿಲ್ ಕೆ. ಆರ್., ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಶಾಸಕ ಕೆ. ರಘುಪತಿ ಭಟ್, ಮಹೇಶ್ ಠಾಕೂರ್, ಕುತ್ಯಾರು ನವೀನ್ ಶೆಟ್ಟಿ, ಗೀತಾಂಜಲಿ ಸುವರ್ಣ,, ಸಂಧ್ಯಾ ರಮೇಶ್, ಗೀತಾ ಶೇಟ್, ಉಡುಪಿ ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ನಾಯಕ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಉಡುಪಿ ಕಾಲೇಜಿನ ವಿಡಿಯೊ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ, ಸಿಎಫ್‌ಐ ಕೈವಾಡವಿದ್ದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದಿಂದ ಸಮಗ್ರ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ವಿಹಿಂಪ, ಬಜರಂಗದಳ ನಿಯೋಗದ ಮನವಿ ಸ್ವೀಕರಿಸಿದರು.