ಉಡುಪಿ: ಜು.27ರಂದು ನೇರ ಸಂದರ್ಶನ

Update: 2023-07-24 15:40 GMT

ಉಡುಪಿ, ಜು.24: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 27ರಂದು ಬೆಳಗ್ಗೆ 10:30ಕ್ಕೆ ನಗರದ ಕೋರ್ಟ್ ರೋಡ್ ದೇವರಾಜ್ ಟವರ್ಸ್‌ ಬಳಿಯ ಪೈ ಇಂಟರ್ ನ್ಯಾಷ್‌ನಲ್ ನಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಸೆಸೆಲ್ಸಿ, ಪಿಯುಸಿ, ಬಿ.ಕಾಂ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News