ಉಡುಪಿ ಜಿಲ್ಲಾ ಮಟ್ಟದ ಪ್ರಬಂಧ- ಚರ್ಚಾ ಸ್ಪರ್ಧೆ

Update: 2024-09-02 11:57 GMT

ಉಡುಪಿ, ಸೆ.2: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿ ಯನ್ ಉಡುಪಿ ಜಂಟಿ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಯುವ ನಾಯಕತ್ವದಿಂದ ಮಾತ್ರವೇ ಸಹಕಾರ ವ್ಯವಸ್ಥೆ ಬಲಾಢ್ಯಗೊಳ್ಳಬಲ್ಲದು’ ಎಂಬ ವಿಷಯದಲ್ಲಿ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಸೆ.13ರಂದು ಬೆಳಗ್ಗೆ 10.30ಕ್ಕೆ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣ ದಲ್ಲಿ ನಡೆಯುವ ಸ್ಫರ್ಧೆಯಲ್ಲಿ ವಿಜೇತರಾದ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಲಿದ್ದಾರೆ. ಪದವಿ ಪೂರ್ವ ಕಾಲೇಜು ವಿಭಾಗದಿಂದ ಚರ್ಚಾ ಸ್ಪರ್ಧೆಗೆ ಇಬ್ಬರು ವಿದ್ಯಾರ್ಥಿಗಳು(ವಿಷಯದ ಪರವಾಗಿ ಒಬ್ಬರು ಮತ್ತು ವಿಷಯದ ವಿರೋಧವಾಗಿ ಒಬ್ಬರು) ಭಾಗವಹಿಸಬಹುದಾಗಿದೆ.

ಚರ್ಚಾ ಸ್ಪರ್ಧೆಯಲ್ಲಿ ಮಾತನಾಡಲು ಕಾಲಾವಕಾಶ 5ನಿಮಿಷಗಳು ಮಾತ್ರ. ಭಾಗವಹಿಸುವ ವಿದ್ಯಾರ್ಥಿಗಳ ಶಿಪಾರಸ್ಸು ಪತ್ರವನ್ನು ಆ.10 ಒಳಗೆ ಕಳುಹಿಸಿ ಕೊಡಬೇಕು.

ಪ್ರಬಂಧ ಸ್ಪರ್ಧೆ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿ ಗಳಿಗೆ ಶಾಲಾ ಕಾಲೇಜುಗಳ ಪಠ್ಯ ವಿಷಯಗಳಲ್ಲಿ ಸಹಕಾರ ವಿಷಯ ಅಳವಡಿಕೆ ಕುರಿತು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಸೆ.10ರಂದು ಬೆಳಗ್ಗೆ 10.15ಕ್ಕೆ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆ ಯಲ್ಲಿ ನಡೆಯುವ ಈ ಸ್ಫರ್ಧೆಯಲ್ಲಿ ವಿಜೇತರಾದ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುತ್ತಾರೆ. ಪ್ರಬಂಧ ಬರೆಯಲು ಕಾಲಾವ ಕಾಶ ಸಮಯ ಒಂದು ಗಂಟೆ. ಉತ್ತರ ಪತ್ರಿಕೆಗಳನ್ನು ಸ್ಥಳದಲ್ಲಿ ಒದಗಿಸಲಾಗುವುದು. ಭಾಗವಹಿಸುವ ವಿದ್ಯಾರ್ಥಿಗಳ ಶಿಪಾರಸ್ಸು ಪತ್ರವನ್ನು ಸೆ.7ರ ಒಳಗೆ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 8546808054/9449894368 ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News