ನ. 1ರಂದು ಉಡುಪಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ

Update: 2023-10-30 14:06 GMT

ಉಡುಪಿ, ಅ.30: ಉಡುಪಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ನವೆಂಬರ್ 1ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು ಭಾಗವಹಿ ಸಲಿದ್ದಾರೆ. ಅಂದು ಬೆಳಗ್ಗೆ 8 ಗಂಟೆಗೆ ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News