ಉಡುಪಿ: ನಡು ರಸ್ತೆಯಲ್ಲಿಯೇ ಗ್ಯಾಂಗ್ ವಾರ್; ಇಬ್ಬರು ಆರೋಪಿಗಳ ಬಂಧನ

Update: 2024-05-25 08:00 GMT

ಉಡುಪಿ: ಉಡುಪಿ-ಮಣಿಪಾಲ ರಸ್ತೆಯ ನಡು ರಸ್ತೆಯಲ್ಲಿಯೇ ಗ್ಯಾಂಗ್ ವಾರ್ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಮೇ 18ರಂದು ಈ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು. ಇದರ ಆಧಾರದ ಮೇಲೆ ಪೊಲೀಸರು ಮೇ 20ರಂದು ಪ್ರಕರಣ ದಾಖಲಿಸಿಕೊಂಡಿದ್ದರು.

ಅದರಂತೆ ಪ್ರಕರಣಕ್ಕೆ ಸಂಬಂಧಿಸಿ ಕಾಪುವಿನ ಗರುಡ ಗ್ಯಾಂಗಿನ ಆಶಿಕ್ ಮತ್ತು ರಕೀಬ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News