ಉಡುಪಿ: ಜಿಲ್ಲಾ ಕ್ರೀಡಾಂಗಣದ ಮೇಲ್ಚಾವಣಿ ಉದ್ಘಾಟನೆ

Update: 2024-08-19 13:47 GMT

ಉಡುಪಿ: ನಗರದ ಅಜ್ಜರಕಾಡಿನಲ್ಲಿರುವ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದ ಪ್ರವೇಶದ್ವಾರದ ಬಳಿ 75.50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಮೇಲ್ಛಾವಣಿಯನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಇತ್ತೀಚೆಗೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News