ಉಡುಪಿ | ಹೂಡೆ ಸಾಲಿಹಾತ್ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ
ಉಡುಪಿ : ಹೂಡೆ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ಅದೀನ ಸಂಸ್ಥೆಯಾಗಿರುವ ಸಾಲಿಹಾತ್ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡವನ್ನು ಜಮಾಅತೆ ಇಸ್ಲಾಮಿ ಹಿಂದ್ ಇದರ ಅಖಿಲ ಭಾರತ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಶನಿವಾರ ಉದ್ಘಾಟಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಸೈಯದ್ ಸಾದತುಲ್ಲಾ ಹುಸೈನಿ, ಸಾಲಿಹಾತ್ ಸಂಸ್ಥೆಯು ಈ ಭಾಗದ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯವನ್ನು ಮಾಡುತ್ತಿದೆ. ಮುಂದೆ ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಏರಿ ಪ್ರಗತಿ ಸಾದಿಸಲಿ ಎಂದು ಶುಭಹಾರೈಸಿದರು.
ಅಧ್ಯಕ್ಷತೆಯನ್ನು ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಸಾಹೇಬ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಮಾಅತೆ ಇಸ್ಲಾಮಿ ಹಿಂದ್‌ನ ಅಖಿಲ ಭಾರತ ಉಪಾಧ್ಯಕ್ಷ ಮಲಿಕ್ ಮೊಹ್‌ತಸೀಮ್ ಖಾನ್, ಎಸ್‌ಐಓ ರಾಷ್ಟ್ರೀಯ ಅಧ್ಯಕ್ಷ ರಮೀಝ್ ಇ.ಕೆ., ಎಸ್‌ಐಓ ನೂತನ ಚುನಾಯಿತ ರಾಷ್ಟ್ರೀಯ ಅಧ್ಯಕ್ಷ ಅಬ್ದುಲ್ ಹಾಫೀಝ್, ಜಮಾಅತೆ ಇಸ್ಲಾಮಿ ಹಿಂದ್‌ನ ರಾಜ್ಯಾಧ್ಯಕ್ಷ ಡಾ.ಬೆಳಗಾಮಿ ಮುಹಮ್ಮದ್ ಸಾದ್, ಎಸ್‌ಐಓ ರಾಜ್ಯಾಧ್ಯಕ್ಷ ಝೀಶಾನ್ ಅಖಿಲ್ ಸಿದ್ದೀಕಿ ಭಾಗವಹಿಸಿದ್ದರು.
ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಇದ್ರೀಸ್ ಹೂಡೆ ಸ್ವಾಗತಿಸಿದರು. ಸಂಸ್ಥೆಯ ಆಡಳಿತಾಕಾರಿ ಮುಹಮ್ಮದ್ ಅಸ್ಲಮ್ ಹೈಕಾಡಿ ವಂದಿಸಿದರು. ಮೌಲನ ಇಮ್ರಾನುಲ್ಲಾ ಖಾನ್ ಮನ್ಸೂರಿ ಕಿರಾತ್ ಪಠಿಸಿದರು. ಸಮೀರ್ ಪಾಷಾ ಕಾರ್ಯಕ್ರಮ ನಿರೂಪಿಸಿದರು.