ಉಡುಪಿ: ಸ್ವಾತಂತ್ರ್ಯ ದಿನಾಚರಣೆ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಉಡುಪಿ: 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಹಿನ್ನೆಲೆಯಲ್ಲಿ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಪಥ ಸಂಚಲನ ನಡೆಸಿದ ಶಾಲಾ ಮಕ್ಕಳಿಂದ ಗೌರವ ರಕ್ಷೆ ಸ್ವೀಕರಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ, ಕಾಂಗ್ರೆಸ್ ಮುಖಂಡರಾದ ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
'ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ' ಕಿರು ಸ್ಮರಣಿಕೆ ಬಿಡುಗಡೆ
ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 'ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ' ಹೆಸರಿನ ಕಿರು ಸ್ಮರಣಿಕೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಬಿಡುಗಡೆಗೊಳಿಸಿದರು.
ಈ ವೇಳೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಎಚ್. ಪ್ರಸನ್ನ, ಅಪರ ಜಿಲ್ಲಾಧಿಕಾರಿ ಮಮತಾ ಕೆ.ಜಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಉಪಸ್ಥಿತರಿದ್ದರು.