ಉಡುಪಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ: ಸಿಎಂಗೆ ಮನವಿ

Update: 2023-08-01 16:05 GMT

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಉಡುಪಿ ಜಿಲ್ಲೆಯ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ರಾಜ್ಯ ಸರಕಾರದಿಂದ ಅನುದಾನ ಒದಗಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಇಂದು ಮನವಿ ಸಲ್ಲಿಸಿತು.

ರಜತ ಮಹೋತ್ಸವದ ಸಂಭ್ರಮದಲ್ಲಿರುವ ಸಂಘವು 25ನೇ ವರ್ಷಾ ಚರಣೆಯ ನೆನಪಿಗಾಗಿ ವರ್ಷ ಇಡೀ 25 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇವುಗಳ ಪೈಕಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆಯು ಪ್ರಮುಖ ಹಾಗೂ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಅಪಘಾತಕ್ಕೀಡಾದ ಅಥವಾ ಅನಾರೋಗ್ಯಕ್ಕೆ ಒಳಗಾದ ಪತ್ರಕರ್ತರಿಗೆ ಆರ್ಥಿಕ ನೆರವು ಒದಗಿಸುವ ಈ ಯೋಜನೆಗೆ ರಾಜ್ಯ ಸರಕಾರದಿಂದ ಗರಿಷ್ಠ ಮೊತ್ತದ ಅನುದಾನವನ್ನು ಒದಗಿಸ ಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಅದೇ ರೀತಿ ಸಂಘದ ಕಾರ್ಯಾಲಯವಾಗಿರುವ ಪತ್ರಿಕಾ ಭವನದ ಮೇಲಂತಸ್ತಿನಲ್ಲಿ ಸಂಘದ ಸದಸ್ಯರು ವಿವಿಧ ಚಟುವಟಿಕೆಗಳನ್ನು ನಡೆಸಲು ಅಗತ್ಯವಾಗಿರುವ ಸಭಾಂಗಣ, ಗ್ರಂಥಾಲಯಗಳನ್ನು ನಿರ್ಮಿಸಲು ಯೋಜನೆ ಹಾಕಿಕೊಂಡಿದ್ದು, ಇದಕ್ಕೂ ವಿಶೇಷ ಅನುದಾನವನ್ನು ಒದಗಿಸಬೇಕು ಎಂದು ಮನವಿ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೂ ಸಂಘದಿಂದ ಮನವಿ ಅರ್ಪಿಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News