ಉಡುಪಿ: ಪೂರ್ಣಪ್ರಜ್ಞದಲ್ಲಿ ಗ್ರಂಥಪಾಲಕರ ದಿನಾಚರಣೆ

Update: 2023-08-14 17:07 GMT

ಉಡುಪಿ, ಆ.14: ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್.ಆರ್.ರಂಗನಾಥನ್ ಅವರ 131ನೇ ಜನ್ಮ ದಿನದ ನೆನಪಿಗಾಗಿ ನಗರದ ಪೂರ್ಣಪ್ರಜ್ಞ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು.

ಉಡುಪಿ ಜಿಲ್ಲಾ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಮುಖ್ಯ ಗ್ರಂಥಾಲಯ ಅಧಿಕಾರಿ ನಳಿನಿ ಜಿ.ಐ. ಅವರು ಕಾರ್ಯ ಕ್ರಮದಲ್ಲಿ ಮಾತನಾಡಿ, ಇಂದಿನ ಡಿಜಿಟಲ್ ಜಗತ್ತಿನಲ್ಲಿ ಇ-ಸಂಪನ್ಮೂಲಗಳ ಪ್ರಾಮುಖ್ಯತೆಯನ್ನು ಅವರು ಮನದಟ್ಟು ಮಾಡಿದರು.

ಗ್ರಂಥಾಲಯದ ಬಳಕೆದಾರರ ವಿವಿಧ ಅವಶ್ಯಕತೆಗಳನ್ನು ಪೂರೈಸಲು ಗ್ರಂಥಾಲಯದಲ್ಲಿರುವ ಭೌತಿಕ ಸಂಪನ್ಮೂಲಗಳು ಮತ್ತು ಇ-ಸಂಪನ್ಮೂಲಗಳ ನಡುವೆ ಗ್ರಂಥಪಾಲಕರು ಹೇಗೆ ಸಮತೋಲನವನ್ನು ಹೊಂದಿದ್ದಾರೆ ಎಂಬುದನ್ನು ಅವರು ಒತ್ತಿ ಹೇಳಿದರು.

ಸಂಸ್ಥೆಯ ನಿರ್ದೇಶಕ ಡಾ.ಭರತ್ ಮಾತನಾಡಿ, ಇಲ್ಲಿನ ಗ್ರಂಥಾಲಯದಲ್ಲಿ ಒದಗಿಸಲಾದ ಎಲ್ಲಾ ಸೌಲಭ್ಯಗಳನ್ನು ಸದುಪ ಯೋಗಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು. ವಿದ್ಯಾರ್ಥಿಗಳು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳು ವಂತೆ ಕಿವಿಮಾತು ಹೇಳಿದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಪಾಲಕಿ ರಂಜಿತ ಸಿ. ಪೂರ್ಣಪ್ರಜ್ಞ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರದ ನಿರ್ದೇಶಕರಾದ ಡಾ.ಕೃಷ್ಣ ಕೊತಾಯ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಸ್ಥೆಯ ಗ್ರಂಥಪಾಲ ಪುರುಷೋತ್ತಮ್ ಸ್ವಾಗತಿಸಿ ಪ್ರಥಮ ಎಂಬಿಎ ವಿದ್ಯಾರ್ಥಿನಿ ಪ್ರೀತಿ ನಾಯಕ್ ವಂದಿಸಿದರು. ನವ್ಯ ಪ್ರಭು ಕಾರ್ಯಕ್ರಮ ನಿರ್ವಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News