ಉಡುಪಿ: ಸೆ. 22ರಂದು ನೇರ ಸಂದರ್ಶನ

Update: 2023-09-20 14:34 GMT

ಉಡುಪಿ, ಸೆ.20: ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ಹೆರಿಗೆ ತಜ್ಞರು -01 (ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ), ವೈದ್ಯಾಧಿಕಾರಿಗಳು-04 (ನಮ್ಮ ಕ್ಲಿನಿಕ್ ಟಿ.ಟಿ ರೋಡ್ ಕುಂದಾಪುರ, ನಮ್ಮ ಕ್ಲಿನಿಕ್ ಮರೀನಾಪುರ ಕಾರ್ಕಳ, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಹಾಗೂ ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆ), ಆಡಿಯೋಮೆಟ್ರಿಕ್ ಅಸಿಸ್ಟೆಂಟ್ -01 ಹುದ್ದೆ, ಯಂಗ್ ಹಿಯರಿಂಗ್ ಇಂಪೈರಿಡ್ ಚಿಲ್ಡ್ರನ್ ಇನ್‌ಸ್ಪೆಕ್ಟರ್-01 ಹುದ್ದೆ (ಜಿಲ್ಲಾ ಆಸ್ಪತ್ರೆ) ಹಾಗೂ ಎಲ್‌ವಿಹೆಚ್ -01 (ಉಡುಪಿಯ ನಗರ ಆರೋಗ್ಯ ಕೇಂದ್ರ) ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಗೆ ಸೆಪ್ಟಂಬರ್ 22ರಂದು ಬೆಳಗ್ಗೆ 10:30ಕ್ಕೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News