ಉಡುಪಿ: ಸೆ.21ರಂದು ನೇರ ಸಂದರ್ಶನ
Update: 2023-09-19 14:28 GMT
ಉಡುಪಿ, ಸೆ.19:ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆ.21ರಂದು ಬೆಳಗ್ಗೆ 10:30 ಕ್ಕೆ ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ (ಹೋಂಡಾ ಟು ವೀಲರ್), ಮ್ಯಾಟ್ರಿನ್ ದಿಯಾ, ಶಿವಳ್ಳಿ, ಕುಂಜಿಬೆಟ್ಟು, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಐಟಿಐ, ಡಿಪ್ಲೋಮಾ ಹಾಗೂ ಇತರ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.