ಉಡುಪಿ: ರೆಡ್‌ಕ್ರಾಸ್‌ನಿಂದ ಬೃಹತ್ ರಕ್ತದಾನ ಶಿಬಿರ

Update: 2023-08-16 15:23 GMT

ಉಡುಪಿ, ಆ.16: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಶಾಖೆ, ಸೈಂಟ್ ಮೆರೀಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್, ಲಯನ್ಸ್ ಕ್ಲಬ್ ಉಡುಪಿ ಮಿಡ್‌ಟೌನ್, ಲಯನ್ಸ್ ಕ್ಲಬ್ ಉಡುಪಿ ಪ್ರಕೃತಿ, ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಉಡುಪಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ರಕ್ತನಿಧಿ ಕೇಂದ್ರ ಮಣಿಪಾಲದ ಸಹಯೋಗದೊಂದಿಗೆ 40ನೇ ವರ್ಷದ ಮಾಣಿಕ್ಯ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿಯ ಸೈಂಟ್ ಮೆರೀಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಆವೆ ಮರಿಂಯ ಹಾಲ್‌ನಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಶಾಖೆಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಭಾರತದಲ್ಲಿ 139 ಕೋಟಿ ಜನಸಂಖ್ಯೆ ಇದ್ದರೂ ಹೆಚ್ಚು ಕಡಿಮೆ ಒಂದೂವರೆ ಮಿಲಿಯ ರಕ್ತದಾನದ ಕೊರತೆ ಇರುವುದರಿಂದ, ಯುವಕ ಯುವತಿಯರು ಸದಾ ಸ್ವಯಂ ಪ್ರೇರಿತ ರಕ್ತದಾನ ಮಾಡಿ, ರೋಗಿಗಳಿಗೆ ಅಗತ್ಯವಿರುವ ರಕ್ತದ ಅವಶ್ಯಕತೆಗಳನ್ನು ಪೂರೈಸುವಂತೆ ಮನವಿ ಮಾಡಿದರು.

ಸೈಂಟ್ ಮೆರೀಸ್ ವಿದ್ಯಾ ಸಂಸ್ಥೆಯ ಸಂಚಾಲಕರಾದ ವಂ. ಚಾರ್ಲ್ಸ್ ಮಿನೆಜಸ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲ ವಂ.ಜೋನ್ಸನ್ ಎಲ್ ಸಿಕ್ವೇರಾ, ಉಪಪ್ರಾಂಶುಪಾಲೆ ಗ್ರೇಟ್ಟಾ ಕ್ವಾಡ್ರಸ್, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ಮೆಡಿಕಲ್ ಆಫೀಸರ್ ಡಾ. ದೀಪ್ ಹಾಗೂ ಲಯನ್ಸ್ ಕ್ಲಬ್‌ನ ವೀಣಾ ಶೆಟ್ಟಿ, ಅನಂತ ಶೆಟ್ಟಿ, ಸುಧಾಕರ್ ಶೆಟ್ಟಿ, ಜ್ಯೋತಿ ಆರ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

ಈ ಶಿಬಿರದಲ್ಲಿ ಒಟ್ಟು 70 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News